ADVERTISEMENT

ಪಟ್ನಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಏಪ್ರಿಲ್ 2023, 9:55 IST
Last Updated 12 ಏಪ್ರಿಲ್ 2023, 9:55 IST
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ.
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ.   

ಪಟ್ನಾ: ನಗರದ ಜಯಪ್ರಕಾಶ್ ನಾರಾಯಣ್ ವಿಮಾನ ನಿಲ್ದಾಣಕ್ಕೆ ಬುಧವಾರ ಬಾಂಬ್ ಬೆದರಿಕೆ ಕರೆ ಬಂದಿದೆ. ಬೆದರಿಕೆಯ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ವಿಮಾನಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದೇ ರೀತಿಯ ಘಟನೆಯಲ್ಲಿ ಇಂದು ದೆಹಲಿಯ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆದರಿಕೆ ಕರೆ ಬಂದ ನಂತರ, ಸಾದಿಕ್ ನಗರದಲ್ಲಿರುವ ಇಂಡಿಯನ್ ಸ್ಕೂಲ್​ನಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸುತ್ತಿದ್ದಾರೆ.

ADVERTISEMENT

ಇಂದು ಬೆಳಿಗ್ಗೆ 10.49ರ ಸುಮಾರಿಗೆ ಇಮೇಲ್ ಸಂದೇಶ ಬಂದಿದೆ. ಬಿಆರ್‌ಟಿ ರಸ್ತೆಯ ಇಂಡಿಯನ್ ಸ್ಕೂಲ್‌ನ ಬ್ರಿಜೇಶ್ ಎಂಬ ವ್ಯಕ್ತಿ ಇ-ಮೇಲ್ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಆವರಣದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.