ADVERTISEMENT

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ; ವಿಚಾರಣೆ ಸ್ಥಗಿತ

ಪಿಟಿಐ
Published 12 ಸೆಪ್ಟೆಂಬರ್ 2025, 9:01 IST
Last Updated 12 ಸೆಪ್ಟೆಂಬರ್ 2025, 9:01 IST
<div class="paragraphs"><p>ಬಾಂಬೆ ಹೈಕೋರ್ಟ್‌</p></div>

ಬಾಂಬೆ ಹೈಕೋರ್ಟ್‌

   

(ಪಿಟಿಐ ಚಿತ್ರ)

ಮುಂಬೈ: ದೆಹಲಿ ಹೈಕೋರ್ಟ್ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ವರದಿಯಾಗಿದೆ.

ADVERTISEMENT

ಇದರಿಂದಾಗಿ ಬಾಂಬೆ ಹೈಕೋರ್ಟ್ ಆವರಣದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ಬೆದರಿಕೆ ಬೆನ್ನಲ್ಲೇ ನ್ಯಾಯಾಲಯದ ಆವರಣವನ್ನು ತೆರವುಗೊಳಿಸಲಾಯಿತು ಮತ್ತು ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದ್ದು, ಕಟ್ಟಡವನ್ನು ಸ್ಫೋಟಿಸುವುದಾಗಿ ಹೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ದೊರಕಿದ ಬೆನ್ನಲ್ಲೇ ಪೊಲೀಸ್ ಸಿಬ್ಬಂದಿ ನ್ಯಾಯಾಲಯಕ್ಕೆ ಧಾವಿಸಿದರು. ಮುಂಜಾಗ್ರತಾ ಕ್ರಮವಾಗಿ ಎಲ್ಲ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಹಾಗೂ ಸಂದರ್ಶಕರನ್ನು ಆವರಣದಿಂದ ತೆರಳುವಂತೆ ಸೂಚಿಸಲಾಯಿತು.

ಪ್ರಮಾಣಿತ ಕಾರ್ಯಾಚರಣೆ ವಿಧಾನಕ್ಕೆ (ಎಸ್‌ಒಪಿ) ಅನುಗುಣವಾಗಿ ನ್ಯಾಯಾಲಯದಿಂದ ಎಲ್ಲರನ್ನು ತೆರವುಗೊಳಿಸಲಾಯಿತು. ಬಾಂಬ್ ಪತ್ತೆ ದಳ ಹಾಗೂ ಶ್ವಾನದಳ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ದೆಹಲಿ ಹೈಕೋರ್ಟ್‌ಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು. ಇದರಿಂದಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತಲ್ಲದೆ ನ್ಯಾಯಾಲಯದ ಆವರಣವನ್ನು ತೆರವುಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.