ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ
ಪಿಟಿಐ
ನವದೆಹಲಿ: ದೆಹಲಿಯ ದ್ವಾರಕಾ ಪ್ರದೇಶದ ಮೂರು ಶಾಲೆಗಳಿಗೆ ಸೋಮವಾರ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿದ್ದು, ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ದೆಹಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್), ಮಾಡ್ರನ್ ಕಾನ್ವೆಂಟ್ ಸ್ಕೂಲ್ ಮತ್ತು ಶ್ರೀರಾಮ್ ವರ್ಲ್ಡ್ ಸ್ಕೂಲ್ ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಜೊತೆಗೆ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸ್ಥಳ ತಪಾಸಣೆ ನಡೆಸುತ್ತಿವೆ. ಬಾಂಬ್ ಕಳುಹಿಸಿದರವರ ಐಪಿ ವಿಳಾಸವನ್ನು ಪತ್ತೆಹಚ್ಚುವಲ್ಲಿ ಸೈಬರ್ ತಂಡ ಕೆಲಸ ಮಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.