
ಪಿಟಿಐ
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ–ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
‘ಬಹರೈನ್‌ನಿಂದ ಬರುತ್ತಿರುವ ವಿಮಾನ ಇಳಿಯುವ ವೇಳೆ ಬಾಂಬ್ ಸ್ಫೋಟ ಮಾಡುವುದಾಗಿ ಅಪರಿಚಿತ ಇ–ಮೇಲ್ ವಿಳಾಸದಿಂದ ವಿಮಾನ ನಿಲ್ದಾಣದ ಗ್ರಾಹಕ ಸೇವಾ ವಿಭಾಗಕ್ಕೆ ಬುಧವಾರ ರಾತ್ರಿ ಸಂದೇಶವೊಂದು ಬಂದಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಸಂದೇಶ ಬರುವ ವೇಳೆಗಾಗಲೇ ವಿಮಾನ ಇಳಿದಿತ್ತು. ತಪಾಸಣೆ ಮಾಡಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದನ್ನು ಹುಸಿ ಬೆದರಿಕೆ ಎಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.