ಲುಫ್ತಾನ್ಸಾ ಏರ್‌ಲೈನ್ಸ್
ಹೈದರಾಬಾದ್: ಫ್ರಾಂಕ್‌ಫರ್ಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ನ ಬೋಯಿಂಗ್ 787–9 ಡ್ರೀಮ್‌ಲೈನರ್ ವಿಮಾನವು ಹಾರಾಟ ಆರಂಭಿಸಿದ ಸ್ವಲ್ಪ ಸಮಯದಲ್ಲೇ ಮರಳಿ, ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಆಗಿದೆ.
ಬಾಂಬ್ ಬೆದರಿಕೆ ಕಾರಣದಿಂದ ವಿಮಾನವು ಹಾರಾಟದ ಮಧ್ಯೆ, ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದೆ ಎಂದು ಲುಫ್ತಾನ್ಸಾ ವಿಮಾನಯಾನ ಸಂಸ್ಥೆ ತಿಳಿಸಿದೆ.
ವಿಮಾನವು ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಿಂದ ಭಾನುವಾರ ಮಧ್ಯಾಹ್ನ 2.15ಕ್ಕೆ ಟೇಕಾಫ್ ಆಗಿತ್ತು. ಸೋಮವಾರ ಮಧ್ಯಾಹ್ನ 1.20ಕ್ಕೆ ಹೈದರಾಬಾದ್‌ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಬೇಕಿತ್ತು.
ಸದ್ಯ ಫ್ರಾಂಕ್‌ಫರ್ಟ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಪ್ರಯಾಣಿಕರು ಇಂದು ಹೈದರಾಬಾದ್‌ಗೆ ಪ್ರಯಾಣ ಮುಂದುವರಿಸಲಿದ್ದಾರೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.