ADVERTISEMENT

ಮಾಸ್ಕೋ-ದೆಹಲಿ ವಿಮಾನಕ್ಕೆ ಬಾಂಬ್ ಬೆದರಿಕೆ; ಸುರಕ್ಷಿತವಾಗಿ ಕೆಳಗಿಳಿದ ಪ್ರಯಾಣಿಕರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಅಕ್ಟೋಬರ್ 2022, 2:49 IST
Last Updated 14 ಅಕ್ಟೋಬರ್ 2022, 2:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಷ್ಯಾದಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ವಿಮಾನದಲ್ಲಿ ಬಾಂಬ್‌ ಇದೆ ಎಂಬ ಬೆದರಿಕೆ ಕರೆ ಬಂದಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಎಎನ್‌ಐ ಟ್ವೀಟ್‌ ಮಾಡಿದ್ದು,'ರಾತ್ರಿಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇದೆ ಎಂಬ ಕರೆ ಬಂದಿತ್ತು. ಬೆಳಗಿನ ಜಾವ 3.20ಕ್ಕೆ ವಿಮಾನವು ದೆಹಲಿ ತಲುಪಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ವಿಮಾನವನ್ನು ತಪಾಸಣೆ ಮಾಡಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ: ದೆಹಲಿ ಪೊಲೀಸ್' ಎಂದು ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT