ADVERTISEMENT

ಚೆನ್ನೈಗೆ ಬಂದ ಅಂತರರಾಷ್ಟ್ರೀಯ ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2025, 9:56 IST
Last Updated 4 ಫೆಬ್ರುವರಿ 2025, 9:56 IST
<div class="paragraphs"><p>ಬಾಂಬ್ ಬೆದರಿಕೆ</p></div>

ಬಾಂಬ್ ಬೆದರಿಕೆ

   

(ಸಾಂದರ್ಭಿಕ ಚಿತ್ರ)

ಚೆನ್ನೈ: ಇಲ್ಲಿನ ವಿಮಾನ ನಿಲ್ಧಾಣಕ್ಕೆ ಇಂದು (ಮಂಗಳವಾರ) ಬಾಂಬ್‌ ಬೆದರಿಕೆಯ ಸಂದೇಶ ಬಂದಿದೆ ಎಂದು ವಿಮಾನನಿಲ್ಧಾಣದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಸುಮಾರು 237 ಪ್ರಯಾಣಿಕರಿದ್ದ ಅಂತರರಾಷ್ಟ್ರೀಯ ವಿಮಾನವು ಚೆನ್ನೈಗೆ ಮರಳುತ್ತಿದ್ದ ವೇಳೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಆತಂಕಕ್ಕೊಳಗಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಮಾನನಿಲ್ಧಾಣಕ್ಕೆ ವಿಮಾನ ಆಗಮಿಸಿದ ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ, ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ಇದೊಂದು ಹುಸಿ ಬಾಂಬ್‌ ಬೆದರಿಕೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಾಂಬ್‌ ಬೆದರಿಕೆ ಹಿನ್ನೆಲೆ ನಡೆಸಲಾದ ತಪಾಸಣೆಯಲ್ಲಿ ಪ್ರಯಾಣಿಕರ ವಸ್ತುಗಳನ್ನು ಸ್ಕ್ಯಾನ್ ಮಾಡುವುದು ಸೇರಿದಂತೆ ಸಂಪೂರ್ಣವಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದು ವಿಮಾನನಿಲ್ಧಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ತಮಿಳುನಾಡಿನ ಈರೋಡ್‌ ಜಿಲ್ಲೆಯ ಎರಡು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆಯ ಇ– ಮೇಲ್‌ಗಳು ಬಂದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.