ADVERTISEMENT

ರಾಜಸ್ಥಾನ | ಮುಖ್ಯಮಂತ್ರಿ ಕಚೇರಿ, ಜೈಪುರ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಪಿಟಿಐ
Published 26 ಜುಲೈ 2025, 8:27 IST
Last Updated 26 ಜುಲೈ 2025, 8:27 IST
   

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಕಚೇರಿ ಹಾಗೂ ಜೈಪುರ ವಿಮಾನ ನಿಲ್ದಾಣಗಳ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಇ –ಮೇಲ್‌ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಜೈಪುರ ವಿಮಾನ ನಿಲ್ದಾಣದ ಅಧಿಕೃತ ಇ–ಮೇಲ್‌ ಖಾತೆಗೆ ಬೆದರಿಕೆ ಪತ್ರ ಬಂದಿದ್ದು, ಒಂದೆರಡು ಗಂಟೆಗಳಲ್ಲಿ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಅದರಲ್ಲಿದೆ.

ಬಾಂಬ್‌ ಬೆದರಿಕೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕಚೇರಿ ಹಾಗೂ ಜೈಪುರ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆಗಳು ಇಂಚಿಚೂ ತಪಾಸಣೆ ನಡೆಸಿವೆ. ಆದರೆ, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಶನಿವಾರ ಸರ್ಕಾರಿ ರಜೆಯಾದ ಕಾರಣ ಸೀಮಿತ ಸಂಖ್ಯೆಯ ಸಿಬ್ಬಂದಿಗಳು ಮುಖ್ಯಮಂತ್ರಿ ಕಚೇರಿಯಲ್ಲಿದ್ದರು. ಅವರನ್ನು ತಕ್ಷಣವೇ ಹೊರ ಕಳಿಸಲಾಗಿದೆ. ಬೆದರಿಕೆ ಬಂದಿರುವ ಇ–ಮೇಲ್‌ನ ಮೂಲವನ್ನು ಪತ್ತೆಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.