ADVERTISEMENT

ರಾಹುಲ್ ಗಾಂಧಿ ವಿರುದ್ಧ ವಿಚಾರಣೆ ಮುಂದೂಡಲು ಹೈಕೋರ್ಟ್‌ ನಿರ್ದೇಶನ

ಪಿಟಿಐ
Published 22 ನವೆಂಬರ್ 2021, 14:33 IST
Last Updated 22 ನವೆಂಬರ್ 2021, 14:33 IST
ರಾಹುಲ್‌ಗಾಂಧಿ
ರಾಹುಲ್‌ಗಾಂಧಿ   

ಮುಂಬೈ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನಹಾನಿ ಮೊಕದ್ದಮೆಯ ವಿಚಾರಣೆಯನ್ನು ಮುಂದೂಡಬೇಕು ಎಂದು ಬಾಂಬೆ ಹೈಕೋರ್ಟ್‌ ಸೋಮವಾರ ಸ್ಥಳೀಯ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.

ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು ಈ ಮೊದಲು ಸಮನ್ಸ್‌ ಜಾರಿಯಾಗಿದ್ದಂತೆ ನವೆಂಬರ್‌ 25ರಂದು ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ. ಬಿಜೆಪಿ ಸದಸ್ಯ ಎನ್ನಲಾದ ಮಹೇಶ್ ಶ್ರಿಶ್ರೀಮಲ್‌ ಅವರು ಮೊಕದ್ದಮೆ ದಾಖಲಿಸಿದ್ದರು.

ರಫೇಲ್ ಯುದ್ಧವಿಮಾನಗಳ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ 2018ರಲ್ಲಿ ‘ಕಮ್ಯಾಂಡರ್‌ ಇನ್‌ ಥೀಫ್‌’ ಎಂದು ರಾಹುಲ್‌ ಟೀಕಿಸಿದ್ದರು. ಈ ಸಂಬಂಧ ಮೊಕದ್ದಮೆ ದಾಖಲಿಸಲಾಗಿತ್ತು. ಸ್ಥಳೀಯ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದ್ದನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.