ಮುಂಬೈ: 2018ರಲ್ಲಿ ನಡೆದ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಕಳೆದ ವಾರ ವಶಕ್ಕೆ ಪಡೆದುಕೊಂಡಿತ್ತು.
ಬಂಧನದಲ್ಲಿರುವ ತಮಗೆ ವಕೀಲರನ್ನೂ ಸಹ ಭೇಟಿ ಮಾಡಲು ಮಹಾರಾಷ್ಟ್ರ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಗೋಸ್ವಾಮಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.