ಮುಂಬೈ: ಮಾದಕ ವಸ್ತು ಪ್ರಕರಣದಲ್ಲಿ ಜಾಮೀನು ಕೋರಿದ್ದ ನಟ ಅರ್ಮಾನ್ ಕೊಹ್ಲಿ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಮಾದಕವಸ್ತು ಸೇವನೆ ಮತ್ತು 1.2 ಗ್ರಾಂ ಹೊಂದಿದ್ದ ಆರೋಪದಲ್ಲಿ ಎನ್ಸಿಬಿ ಅವರನ್ನು ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬಂಧಿಸಿತ್ತು.
ಕೆಳಹಂತದ ಕೋರ್ಟ್ ಜಾಮೀನು ತಿರಸ್ಕರಿಸಿದ್ದ ಬಳಿಕ ಕೊಹ್ಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎನ್.ಡಬ್ಲ್ಯೂ.ಸಾಂಬ್ರೆ ಅವರು ಅರ್ಜಿ ತಿರಸ್ಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.