ADVERTISEMENT

ಬಾಂಬೆ HC ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಶೇಖರ್: SC ಕೊಲಿಜಿಯಂ ಶಿಫಾರಸು

ಪಿಟಿಐ
Published 26 ಆಗಸ್ಟ್ 2025, 6:54 IST
Last Updated 26 ಆಗಸ್ಟ್ 2025, 6:54 IST
ಬಾಂಬೆ ಹೈಕೋರ್ಟ್‌
ಬಾಂಬೆ ಹೈಕೋರ್ಟ್‌   

ನವದೆಹಲಿ: ನ್ಯಾಯಮೂರ್ತಿ ಚಂದ್ರಶೇಖರ್ ಅವರನ್ನು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಪ್ರಸ್ತುತ ಬಾಂಬೆ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಚಂದ್ರಶೇಖರ್, ಜಾರ್ಖಂಡ್ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೂವರು ಸದಸ್ಯರ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಚಂದ್ರಶೇಖರ್ ಅವರ ಹೆಸರನ್ನು ಶಿಫಾರಸು ಮಾಡಿದೆ.

ADVERTISEMENT

ಅದೇ ರೀತಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ವಿಕ್ರಮ್ ನಾಥ್ ಅವರನ್ನೂ ಒಳಗೊಂಡ ಕೊಲಿಜಿಯಂ ಸೋಮವಾರ ನಡೆದ ಸಭೆಯಲ್ಲಿ ಬಾಂಬೆ ಹೈಕೋರ್ಟ್‌ನ ಆರು ಹೆಚ್ಚುವರಿ ನ್ಯಾಯಮೂರ್ತಿಗಳಾದ ಸಂಜಯ್ ಆನಂದರಾವ್ ದೇಶಮುಖ್, ವೃಶಾಲಿ ವಿಜಯ್ ಜೋಶಿ, ಅಭಯ್ ಜೈನಾರಾಯಣಜಿ ಮಂತ್ರಿ, ಶ್ಯಾಮ್ ಛಗನ್ಲಾಲ್ ಚಂದಕ್, ನೀರಜ್ ಪ್ರದೀಪ್ ಧೋಟೆ ಮತ್ತು ಸೋಮಶೇಖರ್ ಸುಂದರೇಶನ್. ಖಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಅನುಮೋದಿಸಿತು.

ಕೇರಳ ಹೈಕೋರ್ಟ್‌ನ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳಾದ ಜಾನ್ಸನ್ ಜಾನ್, ಗೋಪಿನಾಥನ್ ಉನ್ನಿತಾನ್ ಗಿರೀಶ್ ಮತ್ತು ಚೆಲ್ಲಾಪ್ಪನ್ ನಾಡರ್ ಪ್ರತೀಪ್ ಕುಮಾರ್ ಅವರನ್ನು ಖಾಯಂ ನ್ಯಾಯಮೂರ್ತಿನ್ನಾಗಿ ನೇಮಕ ಮಾಡುವ ಪ್ರಸ್ತಾವನೆಯನ್ನು ಕೊಲಿಜಿಯಂ ಅನುಮೋದಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.