ಮುಂಬೈ; ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 'ಪ್ರತಿಭಾವಂತ ವಿದ್ಯಾರ್ಥಿನಿ' ಎಂಬ ಕಾರಣಕ್ಕೆ ಪ್ರಕರಣವನ್ನು ರದ್ದುಗೊಳಿಸಲಾಗುವುದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ಗೌತಮ್ ಅಂಕದ್ ಅವರಿದ್ದ ಪೀಠವು ನಡೆಸಿತು.
19 ವರ್ಷದ ವಿದ್ಯಾರ್ಥಿನಿಯೊಬ್ಬರು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಈ ಸಂಬಂಧ ಆಕೆಯನ್ನು ಬಂಧಿಸಿದ್ದರು. ಬಳಿಕ ಆಕೆ ಜಾಮೀನು ಮೂಲಕ ಹೊರ ಬಂದು ಪರೀಕ್ಷೆ ಬರೆದಿದ್ದಳು.
‘ಆಕೆ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಆಕೆ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ‘ ಕೋರಿ ವಿದ್ಯಾರ್ಥಿನಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಪೋಸ್ಟ್ ಅಳಿಸಿ ಹಾಕಿ ಕ್ಷಮೆಯಾಚಿಸಿದ ಮಾತ್ರಕ್ಕೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿ ಎಂಬ ಕಾರಣದಿಂದ ಪ್ರಕರಣವನ್ನು ರದ್ದುಗೊಳಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ.
ವಿದ್ಯಾರ್ಥಿನಿ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಪ್ರಚೋದಿಸುತ್ತಿದೆ ಎಂದು ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿದ್ದರು. ಬಳಿಕ ಪೋಸ್ಟ್ ಅಳಿಸಿ ಹಾಕಿ ಕ್ಷಮೆಯಾಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.