ADVERTISEMENT

ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ವಿರುದ್ಧ ಮಾನನಷ್ಟ ಮೊಕದ್ದಮೆ: ವಿಚಾರಣೆ ಇಂದು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ನವೆಂಬರ್ 2021, 1:26 IST
Last Updated 12 ನವೆಂಬರ್ 2021, 1:26 IST
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್   

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ವಿರುದ್ಧ ಎನ್‌ಸಿಬಿ ಮುಂಬೈ ವಲಯದ ಅಧಿಕಾರಿ ಸಮೀರ್ ವಾಂಖೆಡೆ ತಂದೆ ಧ್ಯಾನ್‌ದೇವ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಇಂದು(ಶುಕ್ರವಾರ) ನಡೆಸಲಿದೆ.

ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಸಮೀರ್‌ ವಾಂಖೆಡೆ ಅವರ ತಂದೆ ಒಟ್ಟು ₹ 1.25 ಕೋಟಿ ನಷ್ಟ ಪರಿಹಾರ ಕೋರಿದ್ದಾರೆ. ಅಲ್ಲದೆ, ಮುಂದೆಯೂ ತಮ್ಮ ಕುಟುಂಬದ ವಿರುದ್ಧ ಹೇಳಿಕೆ ನೀಡದಂತೆಯೂ ನಿರ್ಬಂಧ ಹೇರಬೇಕು ಎಂದು ಮನವಿ ಮಾಡಿದ್ದಾರೆ.

ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ದಾಖಲಿಸಬೇಕು ಎಂದು ಎನ್‌ಸಿಪಿ ನಾಯಕ ನವಾಬ್‌ ಮಲ್ಲಿಕ್‌ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ಸೂಚಿಸಿದೆ.

ADVERTISEMENT

ಹಡಗಿನಲ್ಲಿ ಡ್ರಗ್ಸ್‌ ಪ್ರಕರಣ ಕುರಿತು ದಾಳಿ ನಡೆಸಿದ್ದ ತಂಡದ ನೇತೃತ್ವವನ್ನು ಸಮೀರ್‌ ವಾಂಖೆಡೆ ವಹಿಸಿದ್ದರು. ಈ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್‌ ಸೇರಿ 19 ಮಂದಿ ಆರೋಪಿಗಳಾಗಿದ್ದಾರೆ. ‘ಇದೊಂದು ನಕಲಿ ಪ್ರಕರಣ’ ಎಂದು ಪ್ರತಿಪಾದಿಸಿರುವ ಸಚಿವ ನವಾಬ್ ಮಲ್ಲಿಕ್‌ ಅವರು ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.