ಚಂಡೀಗಢ: ಅರ್ಜುನ ಪ್ರಶಸ್ತಿ ವಿಜೇತೆ, ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸ್ವೀಟಿ ಬೂರಾ ಅವರು ತಮ್ಮ ಪತಿ, ಕಬ್ಬಡ್ಡಿಯಲ್ಲಿ ಏಷ್ಯಾಡ್ ಕಂಚಿನ ಪದಕ ವಿಜೇತ ದೀಪಕ್ ಹೂಡಾ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಈ ಘಟನೆ ಮಾರ್ಚ್ 15ರಂದು ಹರಿಯಾಣದ ಹಿಸಾರ್‌ನ ಪೊಲೀಸ್ ಠಾಣೆಯೊಳಗೆ ನಡೆದಿದೆ ಎಂದು ವರದಿಯಾಗಿದೆ.
ಈ ಪ್ರಕರಣದ ಸಂಬಂಧ ಎರಡು ಕುಟುಂಬಗಳ ಸದಸ್ಯರು ಪೊಲೀಸ್ ಠಾಣೆಯಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಸ್ವೀಟಿ ಬೂರಾ ಹೂಡಾ ಕಡೆಗೆ ಧಾವಿಸಿ ಅವರ ಕುತ್ತಿಗೆ ಹಿಡಿದುಕೊಂಡು ಹಲ್ಲೆ ಮಾಡಲು ಯತ್ನಿಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಂತರ ಕುಟುಂಬ ಸದಸ್ಯರು ಮಧ್ಯ ಪ್ರವೇಶಿಸಿ ಸ್ವೀಟಿ ಬೂರಾ ಅವರನ್ನು ತಡೆದಿದ್ದಾರೆ.
ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಸ್ವೀಟಿ ಮತ್ತು ದೀಪಕ್ 2022ರಲ್ಲಿ ವಿವಾಹವಾಗಿದ್ದರು. ಇದೀಗ ದೀಪಕ್ ಮತ್ತು ಅವರ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಹರಿಯಾಣದ ಹಿಸ್ಸಾರ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.