ADVERTISEMENT

ಕೇರಳದಲ್ಲಿ ಮತ್ತೊಂದು ರ್‍ಯಾಗಿಂಗ್‌ ಪ್ರಕರಣ: ವಿದ್ಯಾರ್ಥಿಯ ಕೈ ಮೂಳೆ ಮುರಿತ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2025, 15:42 IST
Last Updated 14 ಫೆಬ್ರುವರಿ 2025, 15:42 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ತಿರುವನಂತಪುರ: ನರ್ಸಿಂಗ್‌ ವಿದ್ಯಾರ್ಥಿಯನ್ನು ಕ್ರೂರವಾಗಿ ಹಿಂಸಿಸಿ ರ್‍ಯಾಗಿಂಗ್‌ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಕೇರಳದಲ್ಲಿ ಮತ್ತೊಂದು ರ್‍ಯಾಗಿಂಗ್‌ ಪ್ರಕರಣ ದಾಖಲಾಗಿದೆ.

ಕೇರಳದ ಕಣ್ಣೂರು ಜಿಲ್ಲೆಯಲ್ಲಿ 11ನೇ ತರಗತಿ ವಿದ್ಯಾರ್ಥಿ ಮೇಲೆ 12ನೇ ತರಗತಿ ವಿದ್ಯಾರ್ಥಿಗಳು ರ್‍ಯಾಗಿಂಗ್‌ ಮಾಡಿದ್ದಾರೆ. ಇದರ ಪರಿಣಾಮ ವಿದ್ಯಾರ್ಥಿಯ ಕೈ ಮೂಳೆ ಮುರಿತವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

‘11ನೇ ತರಗತಿ ವಿದ್ಯಾರ್ಥಿ ನಿಹಾಲ್‌ ಹಿರಿಯ ವಿದ್ಯಾರ್ಥಿಗಳಿಗೆ ಗೌರವ ನೀಡುತ್ತಿಲ್ಲ ಮತ್ತು ಅವರ ಮಾತುಗಳನ್ನು ಕೇಳುತ್ತಿಲ್ಲ ಎಂದು ಆರೋಪಿಸಿ, ದೈಹಿಕ ಹಲ್ಲೆ ನಡೆಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ 12ನೇ ತರಗತಿಯ ಐವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಇವರೆಲ್ಲರೂ 18ರ ವಯಸ್ಸಿನವರಾಗಿದ್ದಾರೆ. ಐವರ ಪೈಕಿ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಇನ್ನಿಬ್ಬರಿಗಾಗಿ ಶೋಧ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.