ADVERTISEMENT

BPSC ಪರೀಕ್ಷೆ: ಆಮರಣಾಂತ ಉಪವಾಸ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ

ಪಿಟಿಐ
Published 6 ಜನವರಿ 2025, 2:17 IST
Last Updated 6 ಜನವರಿ 2025, 2:17 IST
<div class="paragraphs"><p>ಪ್ರಶಾಂತ್‌ ಕಿಶೋರ್</p></div>

ಪ್ರಶಾಂತ್‌ ಕಿಶೋರ್

   

ಪಟ್ನಾ: ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಡಿಸೆಂಬರ್ 13ರಂದು ನಡೆಸಿದ್ದ ಪರೀಕ್ಷೆಯನ್ನು ರದ್ದುಪಡಿಸಲು ಒತ್ತಾಯಿಸಿ ಆಮರಣ ನಿರಶನ ನಡೆಸುತ್ತಿದ್ದ ‘ಜನ ಸೂರಜ್’ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನನಿರತ ಸ್ಥಳದಿಂದ ಪ್ರಶಾಂತ್‌ ಕಿಶೋರ್‌ ಮತ್ತು ಅವರ ಬೆಂಬಲಿಗರನ್ನು ಪೊಲೀಸರು ಹೊರ ಕಳಿಸಿದ್ದಾರೆ. ಕಿಶೋರ್‌ ಅವರನ್ನು ಪಟ್ನಾದ ಏಮ್ಸ್‌ಗೆ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ದಿದ್ದಾರೆ ಎಂದು ಬೆಂಬಲಿಗರು ಹೇಳಿದ್ದಾರೆ.

ADVERTISEMENT

ಪಟ್ನಾದ ಗಾಂಧಿ ಮೈದಾನದಲ್ಲಿ ಪ್ರಶಾಂತ್‌ ಕಿಶೋರ್‌ ಆಮರಣ ನಿರಶವನ್ನು ಕಳೆದ ಗುರುವಾರ (ಜ.2) ಆರಂಭಿಸಿದ್ದರು.

ಏನಿದು ಬಿಪಿಎಸ್‌ಸಿ ಪರೀಕ್ಷೆ ಪ್ರಕರಣ?

ಡಿಸೆಂಬರ್‌ 13ರಂದು ನಡೆದ 70ನೇ ಬಿಪಿಎಸ್‌ಸಿ ಕಂಬೈನ್ಡ್ ನೇಮಕಾತಿ ಪರೀಕ್ಷೆಯ (ಸಿಸಿಇ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಹಿನ್ನೆಲೆ, ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ನೂರಾರು ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಭಾನುವಾರ ಗಾಂಧಿ ಮೈದಾನದಿಂದ ಮುಖ್ಯಮಂತ್ರಿ ನಿವಾಸದ ಕಡೆಗೆ ಮೆರವಣಿಗೆ ಮಾಡುವಾಗ ‍ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಪೊಲೀಸರು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದರು.

ಏತ‌ನ್ಮಧ್ಯೆ, ಪ್ರತಿಭಟನನಿರತ ಅಭ್ಯರ್ಥಿಗಳಿಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಪ್ರಶಾಂತ್‌ ಕಿಶೋರ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.