ADVERTISEMENT

ಮಿದುಳು ತಿನ್ನುವ ಅಮೀಬಾ: ಕೇರಳದಲ್ಲಿ ಮತ್ತೊಂದು ಶಂಕಿತ ಪ್ರಕರಣ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 16:12 IST
Last Updated 20 ಆಗಸ್ಟ್ 2025, 16:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರ: ಕೇರಳದಲ್ಲಿ ‘ಮಿದುಳು ತಿನ್ನುವ ಅಮೀಬಾ’ (ಅಮೀಬಿಕ್‌ ಮೆನಿಂಗೊ ಎನ್ಸೆಫಲೈಟಿಸ್‌) ಸೋಂಕಿನ ಪ್ರಕರಣಗಳ ಹೆಚ್ಚಳವು ಆತಂಕ ಮೂಡಿಸಿರುವ ನಡುವೆಯೇ ಬುಧವಾರ ಮಲಪ್ಪುರಂನಲ್ಲಿ 11 ವರ್ಷದ ಬಾಲಕಿಯಲ್ಲಿ ಸೋಂಕಿನ ಗುಣಲಕ್ಷಣಗಳು ಪತ್ತೆಯಾಗಿದೆ. 

ಸೋಂಕಿನ ಗುಣಲಕ್ಷಣಗಳು ಪತ್ತೆಯಾಗಿರುವ ಬಾಲಕಿ ಜ್ವರದಿಂದ ಬಳಲುತ್ತಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕು ಹರಡಿದೆಯೇ? ಇಲ್ಲವೇ ಎಂಬುದನ್ನು ದೃಢಪಡಿಸುವ ವರದಿಗಾಗಿ ಕಾಯುತ್ತಿದ್ದೇವೆ ಎಂದು ಮಲಪ್ಪುರಂ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. 

ಪ್ರಸಕ್ತ ವರ್ಷ ಈವರೆಗೆ 8 ಮಂದಿಗೆ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.