ADVERTISEMENT

ಮದುವೆ ಸಮಾರಂಭದಲ್ಲಿ ಗುಂಡು ಹಾರಾಟ: ವಧುವಿನ ಅಕ್ಕ ಸಾವು

ಪಿಟಿಐ
Published 11 ಜೂನ್ 2022, 15:57 IST
Last Updated 11 ಜೂನ್ 2022, 15:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಏಟಾ (ಉತ್ತರ ಪ್ರದೇಶ): ಇಲ್ಲಿನ ಫರ್ದಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮದುವೆ ಸಮಾರಂಭವೊಂದರ ವೇಳೆ ನಡೆದ ಗುಂಡು ಹಾರಾಟದಲ್ಲಿ ವಧುವಿನ ಅಕ್ಕ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಮಾರಂಭದಲ್ಲಿ ಬಣ್ಣ ಹಚ್ಚಿಕೊಳ್ಳುವ ವಿಚಾರವಾಗಿ ವಧುವಿನ ಕಡೆಯವರು ಹಾಗೂ ಗ್ರಾಮಸ್ಥರ ನಡುವೆ ಜಗಳ ನಡೆದಿದೆ. ಈ ವೇಳೆ ಯಾರೋ ಗುಂಡು ಹಾರಿಸಿದ್ದು, ಸುಧಾ(35) ಎಂಬುವವರು ಸಾವನ್ನಪ್ಪಿದ್ದಾರೆ’ ಎಂದು ಹೇಳಿದ್ದಾರೆ.

ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಗೆ ಸಂಬಂಧಿಸಿ ಕೆಲವರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ಕೆಲವು ಶಂಕಿತರನ್ನು ವಶಕ್ಕೆ ಪಡೆದಿದ್ದೇವೆ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.