ಹೈದರಾಬಾದ್: ಹೈದರಾಬಾದ್‌ನಲ್ಲಿ ನಡೆಯುತ್ತಿರುವ ವಿಶ್ವ ಸುಂದರಿ ಸ್ವರ್ಧೆಯನ್ನು ಮುಂದೂಡುವಂತೆ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರು ತೆಲಂಗಾಣ ಸರ್ಕಾರವನ್ನು ಶುಕ್ರವಾರ ಒತ್ತಾಯಿಸಿದ್ದಾರೆ.
ಬಾಕಿಯಿರುವ ಐಪಿಎಲ್ ಪಂದ್ಯಗಳನ್ನು ಮುಂದೂಡಿದ ಕುರಿತು ಉಲ್ಲೇಖಿಸಿದ ಅವರು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯವು ವಿಶ್ವ ಸುಂದರಿ ಸ್ಪರ್ಧೆಯನ್ನು ಮುಂದೂಡುವ ನಿರ್ಧಾರ ತೆಗೆದುಕೊಳ್ಳದೆ ಕ್ಷುಲ್ಲಕವಾಗಿ ವರ್ತಿಸಬಾರದು ಎಂದು ಹೇಳಿದ್ದಾರೆ.
‘ಈ ಸಮಯದಲ್ಲಿ ಮನೋರಂಜನೆ ಕಾರ್ಯಕ್ರಮಗಳನ್ನು ನಾವು ಆಯೋಜಿಸಬಾರದು. ಐಪಿಎಲ್‌ನಂತಹ ಜನಪ್ರಿಯ ಪಂದ್ಯವೇ ಮುಂದೂಡಲಾಗಿದೆ. ಹಾಗಾಗಿ ವಿಶ್ವ ಸುಂದರಿ ಸ್ಪರ್ಧೆಯನ್ನು ಮುಂದೂಡುವಂತೆ ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದು ಕೆ.ಕವಿತಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.