ADVERTISEMENT

BRS ಶಾಸಕರ ಅನರ್ಹತೆ | 3 ವಾರಗಳಲ್ಲಿ ನಿರ್ಧರಿಸಿ: ಸ್ಪೀಕರ್‌ಗೆ ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 16:15 IST
Last Updated 6 ಫೆಬ್ರುವರಿ 2026, 16:15 IST
   

ನವದೆಹಲಿ: ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿರುವ ಬಿಆರ್‌ಎಸ್‌ ಪಕ್ಷದ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾದ ಅರ್ಜಿಗಳ ಕುರಿತು ಮೂರು ವಾರಗಳೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿದೆ.

ಇದಕ್ಕೆ ತಪ್ಪಿದಲ್ಲಿ ಸ್ಪೀಕರ್‌ ವಿರುದ್ಧ ನ್ಯಾಯಾಂಗ ನಿಂದನೆಗೆ ಸಂಬಂಧಿಸಿ ಕ್ರಮ ಜರುಗಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಸಂಜಯ್‌ ಕರೋಲ್‌ ಹಾಗೂ ಎ.ಜಿ.ಮಸೀಹ್ ಅವರು ಇದ್ದ ಪೀಠ ಎಚ್ಚರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT