ADVERTISEMENT

ಬಿಆರ್‌ಎಸ್‌ ಶಾಸಕರ ಖರೀದಿ ಯತ್ನ: ಎಸ್ಐಟಿ ಮೇಲ್ಮನವಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 2 ಜನವರಿ 2023, 16:30 IST
Last Updated 2 ಜನವರಿ 2023, 16:30 IST

ಹೈದರಾಬಾದ್: ಬಿಆರ್‌ಎಸ್ ಪಕ್ಷದ ಶಾಸಕರ ಖರೀದಿ ಯತ್ನ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಮತ್ತು ಇತರ ಮೂವರನ್ನು ಆರೋಪಿಗಳೆಂದು ಹೆಸರಿಸಲು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದ ಆದೇಶದ ವಿರುದ್ಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿ, 2022ರ ನವೆಂಬರ್‌ನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ವಿಶೇಷ ನ್ಯಾಯಾಲಯದಲ್ಲಿ ಬಿ.ಎಲ್. ಸಂತೋಷ್ ಮತ್ತು ಕೇರಳದ ಇಬ್ಬರು ವ್ಯಕ್ತಿಗಳಾದ ತುಷಾರ್ ವೆಲ್ಲಪಲ್ಲಿ ಮತ್ತು ಜಗ್ಗುಸ್ವಾಮಿ ಮತ್ತು ವಕೀಲ ಬಿ.ಶ್ರೀನಿವಾಸ್ ಅವರನ್ನು ಆರೋಪಿಗಳನ್ನಾಗಿ (ಎ 4 ರಿಂದ ಎ7) ಹೆಸರಿಸುವಂತೆ ಮನವಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT