ಜೈಪುರ: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಘಟನೆಯು ಗುರುವಾರ ನಡೆದಿದ್ದು, ಮೃತರನ್ನು ಪಂಜಾಬ್‌ನ ಹೋಶಿಯಾರ್‌ಪುರದ ಕೃಷ್ಣ ಕುಮಾರ್ (44) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿ ರೂಪ್ ಸಿಂಗ್ ಇಂದಾ ಹೇಳಿದ್ದಾರೆ.
ಶಹಗಢ ಪ್ರದೇಶದ ಭೋನು ಗಡಿ ಹೊರಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೃಷ್ಣ ಅವರು ಕರ್ತವ್ಯದಲ್ಲಿದ್ದಾಗಲೇ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಬೇರೆ ಸೈನಿಕರು ಸ್ಥಳಕ್ಕೆ ಬಂದಾಗ ಅವರು ಮೃತಪಟ್ಟಿರುವುದು ಗೊತ್ತಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.