ಜಮ್ಮು: ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆಯ ಯೋಧರು ಬುಧವಾರ ಸುರಂಗವೊಂದನ್ನು ಗುರುತಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರ ಒಳನುಸುಳುವಿಕೆಗೆ ಅನುಕೂಲವಾಗುವಂತೆ ಗಡಿಯುದ್ದಕ್ಕೂ ನಿರ್ಮಿಸಲಾದ ಸುರಂಗವನ್ನು ಬೋಬಿಯಾನ್ ಗ್ರಾಮದಲ್ಲಿಬುಧವಾರ ಬೆಳಿಗ್ಗೆ ಕಾರ್ಯಾಚರಣೆಯ ಸಂದರ್ಭದಲ್ಲಿ ಬಿಎಸ್ಎಫ್ ಪಡೆ ಪತ್ತೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ಬಿಎಸ್‌ಎಫ್ ಮತ್ತು ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.