ಜಮ್ಮು: ಅಂತರರಾಷ್ಟ್ರೀಯ ಗಡಿಯಲ್ಲಿ ನುಸುಳುಕೋರನ ಹೊಡೆದುರುಳಿಸಿದ ಬಿಎಸ್‌ಎಫ್
ಜಮ್ಮು: ಜಮ್ಮುವಿನ ಆರ್.ಎಸ್ ಪುರ ವಲಯದ ಅಂತರರಾಷ್ಟ್ರೀಯ ಗಡಿಯಲ್ಲಿ ಓರ್ವ ನುಸುಳುಕೋರನನ್ನು ಕೊಲ್ಲಲಾಗಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ.
ಏಪ್ರಿಲ್ 4ರ ಮಧ್ಯರಾತ್ರಿ ಜಮ್ಮು ವಲಯದಲ್ಲಿ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಚಲವಲನ ಭದ್ರತಾ ಪಡೆಗಳ ಕಣ್ಣಿಗೆ ಬಿದ್ದಿದೆ. ಆತ ಅಂತರರಾಷ್ಟ್ರೀಯ ಗಡಿ ದಾಟುತ್ತಿರುವುದನ್ನು ಕಂಡು ಎಚ್ಚರಿಕೆ ನೀಡಿವೆ.
ಎಚ್ಚರಿಕೆಯನ್ನು ಲೆಕ್ಕಿಸದೇ ಮುಂದುವರಿದಾಗ, ಅಪಾಯವನ್ನು ಗ್ರಹಿಸಿದ ಬಿಎಸ್‌ಎಫ್ ಆತನನ್ನು ಹೊಡೆದುರುಳಿಸಿದೆ.
ಆತನ ಗುರುತು ಹಾಗೂ ಉದ್ದೇಶ ಏನೆಂಬುದರ ಬಗ್ಗೆ ತನಿಖೆ ನಡೆಲಾಗುವುದು ಎಂದು ಬಿಎಸ್‌ಎಫ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾಗಿ ಎಎನ್‌ಐ ವರದಿ ಮಾಡಿದೆ. ಆತನ ಶವವನ್ನು ಮರಣೋತ್ತತ ಪರೀಕ್ಷೆಗೆ ಕಳುಹಿಸಲಾಗಿದೆ.
ಇದಾದ ಬಳಿಕ ಸ್ಥಳದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.