
ಪಿಟಿಐ
ಜೈಸಲ್ಮೇರ್: ‘ರಾಜಸ್ಥಾನದ ಜೈಸಲ್ಮೇರ್‌ನ ಲಾಥಿ ಫೈರಿಂಗ್ ರೇಂಜ್‌ನಲ್ಲಿ ಬಂದೂಕು ತರಬೇತಿ ವೇಳೆ ಸಂಭವಿಸಿದ ಆಕಸ್ಮಿಕ ಸ್ಫೋಟದಿಂದಾಗಿ ಬಿಎಸ್‌ಎಫ್ ಯೋಧರೊಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿವೆ’ ಎಂದು ಪೊಲೀಸರು ಬುಧವಾರ ತಿಳಿಸಿದರು.
‘ಮಂಗಳವಾರ ರಾತ್ರಿ ತರಬೇತಿ ವೇಳೆ ಬಂದೂಕಿನ ಮುಂದಿನ ಭಾಗ ಸ್ಫೋಟಗೊಂಡ ಕಾರಣ ಬಿಎಸ್‌ಎಫ್‌ನ ಐದು ಮಂದಿ ಗಾಯಗೊಂಡಿದ್ದರು. ಇದರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಸತೀಶ್ ಕುಮಾರ್(32) ಎಂಬುವರು ಮೃತಪಟ್ಟಿದ್ದರು. ಈ ಬಗ್ಗೆ ಅವರು ಕುಟುಂಬದವರಿಗೆ ತಿಳಿಸಲಾಗಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.