ADVERTISEMENT

ಪೂಂಛ್‌: ಬಿಎಸ್‌ಎಫ್‌ ಯೋಧ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2023, 11:04 IST
Last Updated 9 ಸೆಪ್ಟೆಂಬರ್ 2023, 11:04 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮೆಂಧರ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಬಿಎಸ್‌ಎಫ್‌ ಯೋಧರೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬಾಲಾಕೋಟ್ ಸೆಕ್ಟರ್‌ನ ಭರಣಿ ಮುಂಚೂಣಿ ಠಾಣೆಯಲ್ಲಿ ಶುಕ್ರವಾರ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಹಾರ ಮೂಲದ ಕಾನ್‌ಸ್ಟೆಬಲ್‌ ನಾಪತ್ತೆಯಾಗಿದ್ದಾರೆ. ಗಡಿ ಭದ್ರತಾ ಪಡೆಯ ಯೋಧರ ಗುಂಪು ಹುಡುಕಾಟ ನಡೆಸಿದರೂ ಪತ್ತೆಯಾಗದ ಕಾರಣ, ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.