ADVERTISEMENT

ರಾಜಸ್ಥಾನ: ‍ಪಾಕಿಸ್ತಾನಿ ನುಸುಳುಕೋರನ ಗುಂಡಿಕ್ಕಿ ಹತ್ಯೆ

ಪಿಟಿಐ
Published 6 ಮಾರ್ಚ್ 2021, 7:10 IST
Last Updated 6 ಮಾರ್ಚ್ 2021, 7:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ/ನವದೆಹಲಿ: ‘ರಾಜಸ್ಥಾನದ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯು ಗುಂಡಿಕ್ಕಿ ಹತ್ಯೆ ಮಾಡಿದೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

‘ಗಂಗಾನಗರ-ಬಿಕಾನೇರ್ ಗಡಿ ಬಳಿ ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ ಬಿಎಸ್‌ಎಫ್‌ ಯೋಧರು, ನುಸುಳುಕೋರನ ಮೇಲೆ ಗುಂಡಿನ ದಾಳಿ ನಡೆಸಿದರು’ ಎಂದು ಅವರು ಹೇಳಿದ್ದಾರೆ.

‘ನುಸುಳುಕೋರನ ಮೃತ ದೇಹವನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.