ನವದೆಹಲಿ (ಪಿಟಿಐ): ಪಂಜಾಬ್‌ನ ಭಾರತ–ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್‌ನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಫಿರೋಜ್‌ಪುರ ವಲಯದಲ್ಲಿ ‘ದ ಹೆಕ್ಸ್ ಕಾಪ್ಟರ್’ ಡ್ರೋನ್‌ಅನ್ನು ಮಂಗಳವಾರ ರಾತ್ರಿ 11.25ಕ್ಕೆ ಗುಂಡಿಕ್ಕಿ ಉರುಳಿಸಲಾಯಿತು. ಬಿಎಸ್‌ಎಫ್ ಮತ್ತು ಸ್ಥಳೀಯ ಪೊಲೀಸರ ಜಂಟಿ ತಂಡವು ಡ್ರೋನ್‌ಅನ್ನು ಬುಧವಾರ ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿತು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.