ADVERTISEMENT

ಪಾಕ್‌ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್‌

ಪಿಟಿಐ
Published 8 ಫೆಬ್ರುವರಿ 2023, 17:01 IST
Last Updated 8 ಫೆಬ್ರುವರಿ 2023, 17:01 IST
   

ನವದೆಹಲಿ: ಪಂಜಾಬ್‌ನ ಅಂತರರಾಷ್ಟ್ರೀಯ ಗಡಿ ಮೂಲಕ ಭಾರತವನ್ನು ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್‌ವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹೊಡೆದುರುಳಿಸಿದೆ.

‘ಪಂಜಾಬ್‌ನ ಅಮೃತಸರ ವಲಯದ ‘ಬಾಬಾಪಿರ್‌’ ಪೋಸ್ಟ್‌ ಬಳಿ ಫೆ.7ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಡ್ರೋನ್‌ನ ಅವಶೇಷಗಳು ಪಾಕಿಸ್ತಾನದ ಗಡಿಯೊಳಗೆ ಬಿದ್ದಿತು’ ಎಂದು ಸೇನಾ ವಕ್ತಾರರೊಬ್ಬರು ಬುಧವಾರ ತಿಳಿಸಿದರು.

‘ಪಾಕಿಸ್ತಾನದಿಂದ ಬರುತ್ತಿದ್ದ ಡ್ರೋನ್‌, ಭಾರತದ ಗಡಿ ಪ್ರವೇಶಿಸುತ್ತಿದ್ದಂತೆಯೇ ಬಿಎಸ್‌ಎಫ್‌ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಜೊತೆಗೆ ಡ್ರೋನ್‌ಅನ್ನು ತಡೆಯಲು ಎಲ್ಲಾ ವಿಧಾನಗಳನ್ನು ಅನುಸರಿಸಲಾಯಿತು. ದಾಳಿಯ ಕಾರಣದಿಂದಾಗಿ ವಾಪಸಾಗುತ್ತಿದ್ದ ವೇಳೆ ಪಾಕಿಸ್ತಾನದ ಗಡಿಯಲ್ಲಿತೇ ಡ್ರೋನ್‌ ಬಿದ್ದಿತು’ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.