ADVERTISEMENT

ಜಮ್ಮು: ಗುಂಡು ಹಾರಿಸಿಕೊಂಡು ಬಿಎಸ್‌ಎಫ್ ಯೋಧ ಸಾವು

ಪಿಟಿಐ
Published 25 ಜುಲೈ 2022, 5:24 IST
Last Updated 25 ಜುಲೈ 2022, 5:24 IST
   



ಜಮ್ಮು: ಗಡಿ ಭದ್ರತಾ ಪಡೆಯ(ಬಿಎಸ್ಎಫ್) ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮುವಿನ ಭಾರತ ಮತ್ತು ಪಾಕಿಸ್ತಾನದ ಅಂತರರಾಷ್ಟ್ರೀಯ ಗಡಿಯಲ್ಲಿ ನಡೆದಿದೆ.

ರಾಮದೇವ್ ಸಿಂಗ್ ಮೃತ ಅಧಿಕಾರಿ. ಬೆಳಿಗ್ಗೆ 6.35ರ ಸುಮಾರಿಗೆ ಕಿರಿಯ ಸಹೋದ್ಯೋಗಿಯೊಬ್ಬರು ಅವರ ಕೊಠಡಿಗೆ ಹೋದಾಗ ರಾಮದೇವ್ ತಮ್ಮ ಗನ್ ಜೊತೆ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿರುವುದು ಪತ್ತೆಯಾಗಿದೆ.

ಮೃತ ಎಸ್‌ಐ 12ನೇ ಬೆಟಾಲಿಯನ್‌ಗೆ ಸೇರಿದವರಾಗಿದ್ದು, ಬಿಎಸ್‌ಎಫ್ ಪ್ಲೆಟೋನ್ ಒಂದನ್ನು ಮುನ್ನಡೆಸುತ್ತಿದ್ದರು. ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರಬಹು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಸಾವಿನ ಕಾರಣ ಪತ್ತೆಗೆ ಪೊಲೀಸ್ ಮತ್ತು ಬಿಎಸ್‌ಎಫ್ ಕೋರ್ಟ್ ವಿಚಾರಣೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೃತ ಎಸ್‌ಐ ರಾಮದೇವ್ ಸಿಂಗ್, ರಾಜಸ್ಥಾನದ ಸಿಕರ್ ಜಿಲ್ಲೆಯವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.