ಸಾಂದರ್ಭಿಕ ಚಿತ್ರ
ನವದೆಹಲಿ: ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು (ಬುಧವಾರ) ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಠಾಣ್‌ಕೋಟ್ ಗಡಿ ಪ್ರದೇಶದ ಬಿಒಪಿ ತಾಶ್‌ಪತನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
‘ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ನುಸುಳುಕೋರ, ಗಡಿ ದಾಟಲು ಪ್ರಯತ್ನಿಸಿದ. ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು ಹೇಳಿದ್ದಾರೆ.
ಈಚೆಗೆ ಜಮ್ಮು–ಕಾಶ್ಮೀರದ ಪೂಂಚ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಓಸಿ) ಯೋಧರೊಬ್ಬರು ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಕಾಲಿರಿಸಿದ್ದರಿಂದ ಗಾಯಗೊಂಡಿದ್ದರು. ಸೇನಾ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.