ADVERTISEMENT

ಪಾಕ್ ಗಡಿಯಲ್ಲಿ ಎಕೆ-47, ಪಿಸ್ತೂಲ್ ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಡಿಸೆಂಬರ್ 2022, 11:32 IST
Last Updated 11 ಡಿಸೆಂಬರ್ 2022, 11:32 IST
ಆರೋಪಿಗಳಿಂದ ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳು (ಟ್ವಿಟರ್ ಚಿತ್ರ)
ಆರೋಪಿಗಳಿಂದ ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳು (ಟ್ವಿಟರ್ ಚಿತ್ರ)   

ಚಂಡೀಗಢ: ಪಂಜಾಬ್‌ನ ಅಬೋಹರ್ ಪ್ರದೇಶದಲ್ಲಿ ಎರಡು ಎಕೆ 47, 4 ರೈಫಲ್ ಮ್ಯಾಗಜೀನ್‌, 2 ಪಿಸ್ತೂಲ್‌ಗಳು ಸೇರಿದಂತೆ 4 ಪಿಸ್ತೂಲ್ ಮ್ಯಾಗಜೀನ್‌, ಕಾರ್ಟ್ರಿಡ್ಜ್‌ಗಳನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಇಂದು ವಶಪಡಿಸಿಕೊಂಡಿದೆ.

ಇಂದು ಮಧ್ಯಾಹ್ನ 12:15 ರ ಸುಮಾರಿಗೆ ಬಿಎಸ್‌ಎಫ್ ಪಡೆಗಳು ಕಾರ್ಯಾಚರಣೆ ನಡೆಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಲಖ್ಬೀರ್ ಸಿಂಗ್ ಅಲಿಯಾಸ್ ಲಾಂಡಾ ಹಾಗೂ ಪಾಕಿಸ್ತಾನ ಮೂಲದ ದರೋಡೆಕೋರ ಹರ್ವಿಂದರ್ ಸಿಂಗ್ ರಿಂಡಾ ಜಂಟಿಯಾಗಿ ನಿರ್ವಹಿಸುತ್ತಿದ್ದ ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಘಟಕ ಮೇಲೆ ದಾಳಿ ನಡೆಸಿದ್ದ ಪಂಜಾಬ್‌ ಪೊಲೀಸರು, ಈ ಸಂಬಂಧ ಮೂವರನ್ನು ಬಂಧಿಸಿದ್ದರು.

ADVERTISEMENT

ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆ ಕುರಿತು ಖಚಿತ ಮಾಹಿತಿ ಆಧರಿಸಿ ಪಂಜಾಬ್ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.