ನವದೆಹಲಿ: ರಾಷ್ಟ್ರವ್ಯಾಪಿ ವಿವಿಧ ರೈತ ಸಂಘಟನೆಗಳು ಡಿ.8ರಂದು ನೀಡಿರುವ ‘ಭಾರತ್ ಬಂದ್’ ಕರೆಗೆ ಬಿಎಸ್‌ಎನ್‌ಎಲ್ ನೌಕರರ ಸಂಘ ಬೆಂಬಲ ಸೂಚಿಸಿದೆ.
ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ರೈತರು ಕಳೆದ 12 ದಿನಗಳಿಂದ ದೆಹಲಿಯ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
‘ಸಂಸತ್ತಿನ ಅಧಿವೇಶನದಲ್ಲಿ ಪ್ರಜಾಪ್ರಭುತ್ವ ವಿರೋಧಿಯಾಗಿ ಅಂಗೀಕರಿಸಲ್ಪಟ್ಟ ಕೃಷಿ ಮಸೂದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳ ಬೇಡಿಕೆಗಳನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಬಿಎಸ್‌ಎನ್‌ಎಲ್ ನೌಕರರ ಒಕ್ಕೂಟ (ಬಿಎಸ್‌ಎನ್‌ಎಲ್‌ಯು) ತಿಳಿಸಿದೆ.
ಮಂಗಳವಾರದ ಬಂದ್‌ಗೆ ಬೆಂಬಲಿಸುವಂತೆ ಜಿಲ್ಲಾ ಮಟ್ಟದ ಶಾಖೆಗಳಿಗೆ ಯುನಿಯನ್ ಕರೆ ನೀಡಿದೆ.
ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ, ಎಸ್‌ಪಿ, ಟಿಆರ್‌ಎಸ್ ಸೇರಿದಂತೆ ಹಲವು ಪಕ್ಷಗಳು ಬಂದ್‌ಗೆ ಈಗಾಗಲೇ ಬೆಂಬಲ ಸೂಚಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.