ADVERTISEMENT

ಬಿಎಸ್‌ಎನ್‌ಎಲ್‌ ಗ್ರಾಹಕರ ಸೇವಾ ಕೇಂದ್ರಗಳಲ್ಲಿ ಆಧಾರ್‌ ಸೌಲಭ್ಯ

ಪಿಟಿಐ
Published 29 ನವೆಂಬರ್ 2018, 19:37 IST
Last Updated 29 ನವೆಂಬರ್ 2018, 19:37 IST
   

ನವದೆಹಲಿ:‘ಭಾರತ ಸಂಚಾರ ನಿಗಮದ (ಬಿಎಸ್‌ಎನ್‌ಎಲ್‌) 3000 ಗ್ರಾಹಕ ಸೇವಾ ಕೇಂದ್ರಗಳಲ್ಲಿ ಆಧಾರ್‌ ನೋಂದಣಿ
ಮತ್ತು ಪರಿಷ್ಕರಣೆ ಸೌಲಭ್ಯ ಒದಗಿಸಲಾಗುವುದು. ಇದಕ್ಕಾಗಿ ₹90 ಕೋಟಿ ವೆಚ್ಚ ತಗಲಬಹುದು ಎಂದು ಅಂದಾಜಿಸಲಾಗಿದೆ’ ಎಂದು ಬಿಎಸ್‌ಎನ್‌ಎಲ್‌ ಅಧ್ಯಕ್ಷ ಅನುಪಮ್‌ ಶ್ರೀವಾಸ್ತವ್‌ ಗುರುವಾರ ಹೇಳಿದ್ದಾರೆ.

ಬ್ಯಾಂಕು ಹಾಗೂ ಅಂಚೆ ಕಚೇರಿಗಳಲ್ಲಿಈಗಿರುವ ಆಧಾರ್‌ ಸೇವಾ ಕೇಂದ್ರಗಳಂತೆ ಬಿಎಸ್‌ ಎನ್‌ಎಲ್‌ನ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.

‘ಆಧಾರ್‌ ಸೇವೆ ಒಗಿಸಲು ಉಪಕರಣಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ. ಜನವರಿ 1ರಿಂದ ಈ ಸೇವಾ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ’ ಎಂದು ಶ್ರೀವಾಸ್ತವ್‌ ತಿಳಿಸಿದ್ದಾರೆ.

ADVERTISEMENT

‘ಹೆಚ್ಚಿನ ಕೇಂದ್ರಗಳು ತೆರೆಯುವುದರಿಂದ ಜನರಿಗೆ ಅನುಕೂಲವಾಗಲಿದೆ’ ಎಂದುಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರದ (ಯುಐಡಿಎಐ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಯ್‌ ಭೂಷಣ ಪಾಂಡೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.