ADVERTISEMENT

ಹರಿಯಾಣ: ಬಿಎಸ್‌ಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಪಿಟಿಐ
Published 25 ಜನವರಿ 2025, 9:14 IST
Last Updated 25 ಜನವರಿ 2025, 9:14 IST
<div class="paragraphs"><p>ಹರ್ಬಿಲಾಸ್ ಸಿಂಗ್ ರಜ್ಜುಮಜ್ರಾ</p></div>

ಹರ್ಬಿಲಾಸ್ ಸಿಂಗ್ ರಜ್ಜುಮಜ್ರಾ

   

Credit: X/@AbhaySChautala

ನವದೆಹಲಿ: ಹರಿಯಾಣದ ಅಂಬಾಲದಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಹರ್ಬಿಲಾಸ್ ಸಿಂಗ್ ರಜ್ಜುಮಜ್ರಾನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಹರ್ಬಿಲಾಸ್ ಸಿಂಗ್ ಅವರು ಸ್ನೇಹಿತರಾದ ಪುನೀತ್, ಗುಗಲ್ ಅವರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪುನೀತ್‌ಗೂ ಗುಂಡು ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹರ್ಬಿಲಾಸ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಪುನೀತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಅಂಬಾಲ ಪೊಲೀಸ್ ವರಿಷ್ಠಾಧಿಕಾರಿ ಎಸ್. ಎಸ್. ಭೋರಿಯಾ ತಿಳಿಸಿದ್ದಾರೆ.

ಶೀಘ್ರವೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಬಿಎಸ್‌ಪಿ ಮುಖಂಡರು ಆಗ್ರಹಿಸಿದ್ದಾರೆ. ಹರ್ಬಿಲಾಸ್ ಸಿಂಗ್‌ ಅವರು ಈಚೆಗೆ ನಡೆದ ವಿಧಾನಸಭೆ ಚುನಾವಣೆ ನರೇನ್‌ಗಢ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.