ಬದಾಯುಂ (ಉತ್ತರ ಪ್ರದೇಶ): ಬದಾಯುಂನಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು, ರಾತ್ರಿ ಪೂರ್ತಿ ಆತನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
‘ಪ್ರಮುಖ ಆರೋಪಿಯಾದ ಪುರೋಹಿತ ಸತ್ಯ ನಾರಯಣ, ತನ್ನ ಸಹಚರನೊಬ್ಬನ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು’ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ ಶರ್ಮಾ ತಿಳಿಸಿದರು.
‘ಸತ್ಯ ನಾರಯಣನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಪೊಲೀಸರು ಹೇಳಿದರು.
ಉತ್ತರ ಪ್ರದೇಶದ ಬದಾಯುಂ ಜಿಲ್ಲೆಯಲ್ಲಿ 50 ವರ್ಷದಅಂಗನವಾಡಿ ಕಾರ್ಯಕರ್ತೆಯೊಬ್ಬರನ್ನು ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಅವರ ಶವ ಭಾನುವಾರ ಪತ್ತೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.