ಬುದ್ಗಾಮ್:ಜೈಶ್–ಇ–ಮೊಹಮದ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನುಭದ್ರತಾ ಪಡೆಯು ಜಮ್ಮು ಕಾಶ್ಮೀರದ ಸುಸ್ತು ಗ್ರಾಮದ ಬಳಿ ಹೊಡೆದುರುಳಿಸಿದೆ.
ಈ ವೇಳೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಉಗ್ರರ ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರೆದಿದ್ದು, ಎರಡಕ್ಕೂ ಹೆಚ್ಚು ಉಗ್ರರು ಈ ಪ್ರದೇಶದಲ್ಲಿ ಅವಿತಿರುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಸುತ್ತಮುತ್ತಲ ಪ್ರದೇಶದಲ್ಲಿ ಅಂತರ್ಜಾಲ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.