ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡಗಾಮ್ ಜಿಲ್ಲೆಯಲ್ಲಿ ಆಗಸ್ಟ್ 15ರಂದು ಅಲ್ಪಸಂಖ್ಯಾತರ ನೆಲೆಗಳ ಮೇಲೆ ನಡೆಸಲಾಗಿದ್ದ ಗ್ರೆನೇಡ್ ದಾಳಿಯ ಸಂಬಂಧ ಲಷ್ಕರ್ ಎ ತಯಬಾದ ಉಗ್ರನೊಬ್ಬನನ್ನು ಭದ್ರತಾ ಪಡೆಯವರು ಸೋಮವಾರ ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಡಿ ಬಂಧನಕ್ಕೊಳಗಾಗಿರುವವರ ಸಂಖ್ಯೆ ಮೂರಕ್ಕೆ ಏರಿದೆ.
‘ಸುಹೇಲ್ ಅಹ್ಮದ್ ಮಲಿಕ್ ಬಂಧಿತ. ಈತ ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿದ್ದ. ಬಂಧನದ ವೇಳೆ ಈತನ ಬಳಿ ಇದ್ದ ಗ್ರೆನೇಡ್ ಹಾಗೂ ಇತರ ಸ್ಫೋಟಕಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.