ADVERTISEMENT

ಬಜೆಟ್‌ ಮಂಡನೆ ‍ಪಾರದರ್ಶಕವಾಗಿಲ್ಲ: ಕಾಂಗ್ರೆಸ್‌ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2026, 7:51 IST
Last Updated 1 ಫೆಬ್ರುವರಿ 2026, 7:51 IST
ಜೈರಾಮ್‌ ರಮೇಶ್‌
ಜೈರಾಮ್‌ ರಮೇಶ್‌   

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಈ ಬಾರಿಯ ಬಜೆಟ್‌ನಲ್ಲಿ ಯಾವುದೇ ಪ್ರಮುಖ ಯೋಜನೆಗಳ ಬಗ್ಗೆ ಮಾಹಿತಿ ನೀಡಿಲ್ಲ, ಪಾರದರ್ಶಕವಾಗಿಲ್ಲ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಈ ಬಾರಿಯ ಬಜೆಟ್‌ನಲ್ಲಿ ಯಾವುದೇ ಕ್ಷೇತ್ರಗಳಿಗೆ ಪ್ರಮುಖ ಯೋಜನೆಗಳನ್ನು ಘೋಷಿಸಿಲ್ಲ. ಈ ಬಾರಿಯ ಬಜೆಟ್‌ ಭಾಷಣದ ಅವಧಿ ಕಡಿಮೆಯಾಗಿತ್ತು. ಬಜೆಟ್‌ನಲ್ಲಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಂಚಿಕೆಯಾಗಿರುವ ಮೊತ್ತದ ಬಗ್ಗೆ ಸ್ಪಷ್ಟ ಮಾಹಿತಿ ಒದಗಿಸಿಲ್ಲ. ಈ ಬಜೆಟ್‌ ಪಾರದರ್ಶಕವಾಗಿಲ್ಲ ಎಂದು ಹೇಳಿದ್ದಾರೆ.

ಈ ಬಾರಿ ನಿರ್ಮಲಾ ಸೀತಾರಾಮನ್‌ 1 ಗಂಟೆ 25 ನಿಮಿಷಗಳ ಕಾಲ ಬಜೆಟ್‌ ಮಂಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.