ADVERTISEMENT

ಫೆಬ್ರುವರಿ 1ರಂದು ಕೇಂದ್ರ ಮಧ್ಯಂತರ ಬಜೆಟ್‌?

ಪಿಟಿಐ
Published 9 ಜನವರಿ 2019, 19:38 IST
Last Updated 9 ಜನವರಿ 2019, 19:38 IST
   

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಫೆಬ್ರುವರಿ 13ರವರೆಗೆ ನಡೆಯಲಿದ್ದು, ಮಧ್ಯಂತರ ಬಜೆಟ್ ಫೆ.1ರಂದು ಮಂಡನೆಯಾಗುವ ನಿರೀಕ್ಷೆ ಇದೆ.

ಗೃಹ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಬಜೆಟ್ ಅಧಿವೇಶನ ದಿನಾಂಕದ ಬಗ್ಗೆ ಚರ್ಚಿಸಲಾಯಿತು ಎಂದು ಸರ್ಕಾರದ ಮೂಲಗಳು ಬುಧವಾರ ತಿಳಿಸಿವೆ.ರಾಷ್ಟ್ರಪತಿ ಜ.31ರಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅದೇ ದಿನ ಆರ್ಥಿಕ ಸಮೀಕ್ಷೆಯ ವರದಿಯೂ ಮಂಡನೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT