ADVERTISEMENT

ಉತ್ತರ ಪ್ರದೇಶ: ಗುಂಡಿಕ್ಕಿ ಇಬ್ಬರು ಬಿಲ್ಡರ್‌ಗಳ ಹತ್ಯೆ

ಪಿಟಿಐ
Published 8 ಸೆಪ್ಟೆಂಬರ್ 2020, 7:05 IST
Last Updated 8 ಸೆಪ್ಟೆಂಬರ್ 2020, 7:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನೋಯ್ಡಾ: ಬಿಲ್ಡರ್‌ಗಳಿಬ್ಬರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಗ್ರೇಟರ್ ನೋಯ್ಡಾದಅಜ್ನಾರಾ ಲೆ ಗಾರ್ಡನ್ ಸೊಸೈಟಿ ಬಳಿ ಕುಳಿತಿದ್ದದಲ್ಚಾಂದ್‌ ಶರ್ಮಾ ಮತ್ತು ಅರುಣ್‌ ತ್ಯಾಗಿ ಮೇಲೆ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

‘ಪ್ರಕರಣ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ. ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.