ADVERTISEMENT

ಬಹುಮಹಡಿ ಕಟ್ಟಡ ಕುಸಿತ: ಇಬ್ಬರ ಸಾವು

ಪಿಟಿಐ
Published 24 ಆಗಸ್ಟ್ 2019, 19:27 IST
Last Updated 24 ಆಗಸ್ಟ್ 2019, 19:27 IST
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ –ಪಿಟಿಐ ಚಿತ್ರ
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ –ಪಿಟಿಐ ಚಿತ್ರ   

ಠಾಣೆ: ನಾಲ್ಕು ಮಹಡಿಯ ಹಳೆಯ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮೃತಪಟ್ಟು, ಐದು ಮಂದಿ ಗಾಯಗೊಂಡಿರುವ ಘಟನೆ ಸಮೀಪದ ಭಿವಂಡಿ ಪಟ್ಟಣದಲ್ಲಿ ನಡೆದಿದೆ.

ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ನಿವಾಸಿಗಳು ಪಾಲಿಕೆಗೆ ಮಾಹಿತಿ ನೀಡಿದ್ದರು.ಶುಕ್ರವಾರ ರಾತ್ರಿಯೇಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ (ಆರ್‌ಡಿಎಂಸಿ) ಸಿಬ್ಬಂದಿ ಆಗಮಿಸಿ,ಕಟ್ಟಡದನಿವಾಸಿಗಳನ್ನು ಸ್ಥಳಾಂತರಿಸುತ್ತಿದ್ದರು. ಈ ವೇಳೆಬೆಳಗಿನ ಜಾವ 1.30ರ ಸುಮಾರಿಗೆ ಕಟ್ಟಡ ಕುಸಿದಿದೆ ಎಂದುಆರ್‌ಡಿಎಂಸಿ ಮುಖ್ಯಸ್ಥ ಸಂತೋಷ್‌ ಕದಂ ಮಾಹಿತಿ ನೀಡಿದ್ದಾರೆ.

ಮೃತರನ್ನು ಸಿರಾಜ್‌ ಅನ್ಸಾರಿ (26), ಮೊಹಮ್ಮದ್‌ ಶೇಖ್‌ (27) ಎಂದು ಗುರುತಿಸಲಾಗಿದೆ.ಗಾಯಗೊಂಡ ಐವರಲ್ಲಿ ಇಬ್ಬರು ಅಗ್ನಿಶಾಮಕ ದಳದಸಿಬ್ಬಂದಿಯಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಠಾಣೆ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ಹಲವು ಮಂದಿ ಅವಶೇಷದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಕಟ್ಟಡ ಕುಸಿತದಿಂದ ಪಕ್ಕದಲ್ಲಿದ್ದ ಇತರ ಕಟ್ಟಡಗಳಿಗೂ ಹಾನಿ ಆಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.