ಗುರುಗ್ರಾಮ: ಹರಿಯಾಣದ ಗುರುಗ್ರಾಮದಲ್ಲಿ ‘ಉದ್ಯೋಗ್ ವಿಹಾರ್‘ನಲ್ಲಿ ಕಟ್ಟಡವೊಂದನ್ನು ನೆಲಸಮ ಮಾಡುವಾಗ ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇನ್ನೂ ಇಬ್ಬರು ತೀವ್ರವಾಗಿ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮೃತಪಟ್ಟ ಇಬ್ಬರು ಹಾಗೂ ಗಾಯಗೊಂಡ ಕಾರ್ಮಿಕರುಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯವರು ಎಂದು ಪೊಲೀಸರು ಹೇಳಿದ್ದಾರೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಎರಡು ಮಹಡಿಗಳನ್ನು ಕೆಡವಲಾಗಿತ್ತು. ಉಳಿದ ಭಾಗ ಕಾರ್ಮಿಕರ ಮೇಲೆ ಕುಸಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.