ADVERTISEMENT

ಹಿಮಾಚಲದಲ್ಲಿ ಬಹುಮಹಡಿ ಕಟ್ಟಡ ಕುಸಿತ: 2 ಸಾವು, ಅವಶೇಷಗಳಡಿಯಲ್ಲಿ ಸಿಲುಕಿದ ಯೋಧರು

​ಪ್ರಜಾವಾಣಿ ವಾರ್ತೆ
Published 14 ಜುಲೈ 2019, 14:18 IST
Last Updated 14 ಜುಲೈ 2019, 14:18 IST
   

ನವದೆಹಲಿ: ಹಿಮಾಚಲ ಪ್ರದೇಶದಸೋಲಾನ್ ಎಂಬಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದು ಇಬ್ಬರು ಸಾವಿಗೀಡಾಗಿದ್ದಾರೆ.ಭಾನುವಾರ ಸಂಜೆ ಈ ಘಟನೆ ಸಂಭವಿಸಿದ್ದು, ಕಟ್ಟಡದ ಅವಶೇಷಗಳಡಿಯಲ್ಲಿ ಹಲವಾರು ಯೋಧರು ಮತ್ತು ಅವರ ಕುಟುಂಬದವರು ಸಿಲುಕಿದ್ದಾರೆ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಎಎನ್‌ಐ ಸುದ್ದಿಸಂಸ್ಥೆಯ ಪ್ರಕಾರ, ಘಟನೆ ವೇಳೆಕಟ್ಟಡದಲ್ಲಿ 30 ಯೋಧರು ಮತ್ತು 7 ನಾಗರಿಕರು ಇದ್ದರು. 18 ಯೋಧರು ಮತ್ತು 5 ನಾಗರಿಕರನ್ನು ರಕ್ಷಿಸಲಾಗಿದೆ. ಎರಡು ಮೃತದೇಹ ಪತ್ತೆಯಾಗಿದ್ದು 14 ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವುದಾಗಿ ಶಂಕಿಸಲಾಗಿದೆ.

ಈಗಾಗಲೇ 19 ಮಂದಿಯನ್ನು ರಕ್ಷಿಸಿದ್ದು, ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

ADVERTISEMENT

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದವರಿಸಿದ್ದು, ಇನ್ನೊಂದು ತಂಡ ಅಲ್ಲಿಗೆ ಧಾವಿಸಿದೆ.

ರೆಸ್ಟುರಾ ಹೊಂದಿರುವ ಬಹುಮಹಡಿ ಕಟ್ಟಡ ಮಳೆಯಿಂದಾಗಿ ಕುಸಿದು ಬಿದ್ದಿದೆ ಎಂದು ಪಿಟಿಐ ವರದಿ ಮಾಡಿದೆ.

ಯೋಧರು ಮತ್ತು ಅವರ ಕುಟುಂಬದವರು ಉತ್ತರಾಖಂಡಕ್ಕೆ ಹೋಗುತ್ತಿದ್ದ ದಾರಿಯಲ್ಲಿ ಮಧ್ಯಾಹ್ನದ ಊಟ ಮಾಡಲು ಈ ರೆಸ್ಟುರಾಗೆ ಬಂದಿದ್ದರು ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.