ADVERTISEMENT

ಟ್ರಕ್ ಡಿಕ್ಕಿ:ಪಲ್ಟಿ ಹೊಡೆದ ಟ್ರ್ಯಾಕ್ಟರ್ ಟ್ರಾಲಿ: 8 ಮಂದಿ ಸಾವು,43 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 2:14 IST
Last Updated 25 ಆಗಸ್ಟ್ 2025, 2:14 IST
   

ಬುಲಂದ್‌ಶಹರ್(ಉತ್ತರ ಪ್ರದೇಶ): ಟ್ರಕ್‌ವೊಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಮೃತಪಟ್ಟು 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಿನ ಜಾವ 2.10ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬುಲಂದ್‌ಶಹರ್–ಅಲಿಘಡ ಗಡಿ ಪ್ರದೇಶ ಅರ್ನಿಯಾ ಬೈಪಾಸ್ ಬಳಿ ಈ ಘಟನೆ ನಡೆದಿದೆ. ಕ್ಯಾಂಟರ್ ಟ್ರಕ್ ಹಿಂಬದಿಯಿಂದ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ ಹೊಡೆದಿದೆ ಎಂದು ಎಸ್‌ಪಿ ದಿನೇಶ್ ಕುಮಾರ್ ಹೇಳಿದ್ದಾರೆ.

ಟ್ರಾಕ್ಟರ್ ಟ್ರಾಲಿಯಲ್ಲಿ 61 ಜನರಿದ್ದರು. ಅವರುಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗೆ ಪ್ರಯಾಣಿಸುತ್ತಿದ್ದರು. ಈ ಪೈಕಿ 8 ಮಂದಿ ಮೃತಪಟ್ಟಿದ್ದು, 43 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಮಂದಿ ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ADVERTISEMENT

ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.