ನವದೆಹಲಿ: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆ ಪೊಲೀಸ್ ಸಿಬ್ಬಂದಿಯೊಬ್ಬರ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಇಬ್ಬರು ವಕೀಲರ ಕಕ್ಷಿಗಾರರ ನಡುವೆ ಜಗಳ ನಡೆಯುತ್ತಿದ್ದ ಸಮಯದಲ್ಲಿ ನಾಗಾಲ್ಯಾಂಡ್ ಪೊಲೀಸ್ ಸಿಬ್ಬಂದಿಯ ಸರ್ವೀಸ್ ಬಂದೂಕಿನಿಂದ ಗುಂಡು ಸಿಡಿದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಭದ್ರತಾ ಕರ್ತವ್ಯದಲ್ಲಿದ್ದ ನಾಗಾಲ್ಯಾಂಡ್ ಪೊಲೀಸ್ ಸಿಬ್ಬಂದಿಯು ಇಬ್ಬರು ವಕೀಲರ ಕಕ್ಷಿಗಾರರ ನಡುವಿನ ಜಗಳವನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸುತ್ತಿದ್ದ ಸಂದರ್ಭದಲ್ಲಿ ಅವರ ಶಸ್ತ್ರದಿಂದ ಗುಂಡು ಸಿಡಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡು ನೆಲಕ್ಕೆ ಬಡಿದಿದ್ದು, ಯಾರಿಗೂ ಗಾಯ ಆಗಿಲ್ಲ. ಅದು ಆಕಸ್ಮಿಕವಾಗಿ ಸಂಭವಿಸಿದ ಘಟನೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.