ADVERTISEMENT

ಲಖನೌ ಸಮೀಪ ಬಸ್ ಅಪಘಾತ-7 ಮಂದಿ ಸಾವು, 34 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 10:38 IST
Last Updated 21 ಏಪ್ರಿಲ್ 2019, 10:38 IST
Accident spot
Accident spot   

ಉತ್ತರಪ್ರದೇಶ: ಇಲ್ಲಿನ ಆಗ್ರಾ- ಲಖನೌ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು 34 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗಿನ ಜಾವ ಸಂಭವಿಸಿದೆ.

ಲಾರಿ ಹಾಗೂ ಬಸ್‌ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಬಸ್ ಜಖಂಗೊಂಡಿದ್ದು, ನಿದ್ರೆಗೆ ಜಾರಿದ್ದ ಪ್ರಯಾಣಿಕರಲ್ಲಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಲ್ಲದೆ, ಉಳಿದ 34 ಮಂದಿಗೆ ತೀವ್ರಗಾಯಗಳಾಗಿವೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಇದು ಎಕ್ಸ್ ಪ್ರೆಸ್ ಹೆದ್ದಾರಿಯಾಗಿದ್ದು, ವಾಹನಗಳು ಅತಿವೇಗದಿಂದ ದಿನದ 24ಗಂಟೆಗಳೂ ಸಂಚರಿಸುತ್ತವೆ. ಘಟನೆಯಲ್ಲಿ ಮೃತಪಟ್ಟವರ ಹೆಸರು ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ. ಮೇನ್ ಪುರಿ ಸಮೀಪ ಈ ಘಟನೆ ಸಂಭವಿಸಿದ್ದು, ವಿಷಯ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ADVERTISEMENT

ಬಸ್‌ನ ತುಂಬಾ ಪ್ರಯಾಣಿಕರು ತುಂಬಿದ್ದು, ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು ಎಂಬುದರ ಬಗ್ಗೆ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.