ADVERTISEMENT

ಆಗ್ರಾ– ಲಖನೌ ಎಕ್ಸ್‌ಪ್ರೆಸ್‌ ವೇ | ಡಬಲ್‌ ಡೆಕ್ಕರ್‌ ಬಸ್ –ಕಾರು ಡಿಕ್ಕಿ; 7 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಆಗಸ್ಟ್ 2024, 4:25 IST
Last Updated 4 ಆಗಸ್ಟ್ 2024, 4:25 IST
<div class="paragraphs"><p>ಅಪಘಾತ</p></div>

ಅಪಘಾತ

   

ಪ್ರಾತಿನಿಧಿಕ ಚಿತ್ರ

ನವದೆಹಲಿ: ಆಗ್ರಾ– ಲಖನೌ ಎಕ್ಸ್‌ಪ್ರೆಸ್‌ ವೇ ನಲ್ಲಿ ಡಬಲ್‌ ಡೆಕ್ಕರ್‌ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.

ADVERTISEMENT

‘ಮಧ್ಯರಾತ್ರಿ 12.30ರ ಹೊತ್ತಿಗೆ ಅಪಘಾತ ಸಂಭವಿಸಿದೆ. ರಾಯ್‌ಬರೇಲಿಯಿಂದ ಬಸ್‌ ದೆಹಲಿಗೆ ಹೊರಟಿತ್ತು. ಬಸ್‌ನಲ್ಲಿ 60 ಪ್ರಯಾಣಿಕರಿದ್ದರು ಅದರಲ್ಲಿ ನಾಲ್ವರು ಮೃತಪಟ್ಟಿದ್ದು 20–25 ಜನ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸ್‌ನಲ್ಲಿದ್ದ ಉಳಿದ ಪ್ರಯಾಣಿಕರನ್ನು ಇತರ ವಾಹನ ವ್ಯವಸ್ಥೆ ಮಾಡಿ ಅವರ ಸ್ಥಳಗಳಿಗೆ ಕಳುಹಿಸಲಾಗಿದೆ. ಕಾರು ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.