ADVERTISEMENT

ಹಿಮಾಚಲ ಪ್ರದೇಶ | ಕಂದಕಕ್ಕೆ ಉರುಳಿದ ಬಸ್‌: ಚಾಲಕ ಸಾವು, 30 ಮಂದಿಗೆ ಗಂಭೀರ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2024, 9:59 IST
Last Updated 10 ಡಿಸೆಂಬರ್ 2024, 9:59 IST
<div class="paragraphs"><p>ಬಸ್‌ ಅಪಘಾತ</p></div>

ಬಸ್‌ ಅಪಘಾತ

   

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಇಂದು (ಮಂಗಳವಾರ) ಖಾಸಗಿ ಬಸ್‌ವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಲ್ಲು ಜಿಲ್ಲೆಯ ಅನಿ ಉಪವಿಭಾಗದಲ್ಲಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಆಳವಾದ ಕಮರಿಗೆ ಬಿದ್ದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಂಭವವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ’ ಎಂದು ಕುಲ್ಲು ಜಿಲ್ಲಾಧಿಕಾರಿ ತೋರುಲ್ ಎಸ್.ರವೀಶ್ ಮಾಹಿತಿ ನೀಡಿದ್ದಾರೆ.

ಈಚೆಗೆ ಉತ್ತರಾಖಂಡದ ಅಲ್ಮೋಡಾ ಜಿಲ್ಲೆಯ ಮರ್ಚುಲಾದಲ್ಲಿ ಖಾಸಗಿ ಬಸ್‌ವೊಂದು 200 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಪರಿಣಾಮ 10 ಮಂದಿ ಮಹಿಳೆಯರು ಸೇರಿದಂತೆ 30ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.